Loading...
  • aksharakrantinagarajnaik@gmail.com
  • +91 8073197439
Total Visitors: 241
ನೀವು ತಿಳಿಯಬೇಕಾದ ಪ್ರಮುಖ ಸುದ್ದಿಗಳು! | ರಾಜ್ಯ ಸರ್ಕಾರದಿಂದ ಹೊಸ ಯೋಜನೆ ಘೋಷಣೆ! | ಬ್ಯಾಂಕುಗಳ ವಹಿವಾಟಿನಲ್ಲಿ ಹೊಸ ಮಾರ್ಗಸೂಚಿಗಳು | ಕ್ರೀಡಾ ಪ್ರಪಂಚದಲ್ಲಿ ಭಾರೀ ಸುದ್ದಿ! | ನಮ್ಮ ಆರೋಗ್ಯಕ್ಕಾಗಿ ಸರಳ ಮನೆಮದ್ದಿನ ಪರಿಹಾರಗಳು | ರಾಜಕೀಯದಲ್ಲಿ ಮತ್ತೆ ಬಿರುಸು – ಏನಾಗುತ್ತಿದೆ? | ನಿವೇಶನ ದರಗಳು ಹೆಚ್ಚಳ – ನಿಮ್ಮ ಹಣ ಹೂಡಲು ಇವೇ ಅವಕಾಶಗಳು | ಫಿಲ್ಮ್ ಇಂಡಸ್ಟ್ರಿಯಲ್ಲಿ ಹೊಸ ಸಿನಿಮಾ ಬಿಡುಗಡೆ! | ಅತ್ಯಾಧುನಿಕ ತಂತ್ರಜ್ಞಾನ – ಮುಂದಿನ ಪೀಳಿಗೆಯ ಗ್ಯಾಜೆಟ್‌ಗಳು | ನಿಮ್ಮ ಊರಿನ ಸ್ಥಳೀಯ ಸುದ್ದಿಗಳನ್ನು ಇಲ್ಲಿ ನೋಡಿ! |
news
16:45:00 2025-04-04

ವಿಜೃಂಭಣೆಯಿಂದ ನಡೆಯುತ್ತಿರುವ ಅವರಗುಪ್ಪ ಶ್ರೀ ಮಾರಿಕಾಂಬ ದೇವಿ ಜಾತ್ರಾ ಮಹೋತ್ಸವ.

News Details

ಸಿದ್ದಾಪುರ : ತಾಲೂಕಿನ ಅವರಗುಪ್ಪದಲ್ಲಿ ಪ್ರತಿ 9 ವರ್ಷಕ್ಕೊಮ್ಮೆ ನಡೆಯುವ ಶ್ರೀ ಮಾರಿಕಾಂಬ ದೇವಿ ಜಾತ್ರಾ ಮಹೋತ್ಸವ ಮಂಗಳವಾರದಿಂದ ಆರಂಭಗೊಂಡು ವಿಜೃಂಭಣೆಯಿಂದ ನಡೆಯುತ್ತಿದೆ.
ನಿತ್ಯ ಸಾವಿರಾರು ಭಕ್ತರು ಜಾತ್ರೋತ್ಸವಕ್ಕೆ ಆಗಮಿಸಿ ದೇವರಿಗೆ ಪೂಜೆ ಸಲ್ಲಿಸಿ ದೇವರ ದರ್ಶನ ಪಡೆದು ಊರಿನಲ್ಲಿ ಏರ್ಪಡಿಸಿದ ಔತಣಕೂಟದಲ್ಲಿ ಭೋಜನ ಸವಿದ ದೃಶ್ಯ ಬುಧವಾರ, ಗುರುವಾರದಂದು ಕಂಡುಬಂದಿತು.
ಜಾತ್ರೋತ್ಸವದ ಪ್ರಯುಕ್ತ ಸಿದ್ಧಮಾಡಿದ ಮಂಟಪವು ವಿಶೇಷವಾಗಿ ಕಂಗೊಳಿಸುತ್ತಿದ್ದು ಭಕ್ತರ ಗಮನ ಸೆಳೆಯುತ್ತಿದೆ.
ವಿಶಾಲವಾದ ಮೈದಾನದಲ್ಲಿ ಹಾಕಿರುವ ಅಂಗಡಿ ಮುಂಗಟ್ಟುಗಳಲ್ಲಿ ಬಗೆ ಬಗೆ ವಸ್ತುಗಳನ್ನು ಖರೀದಿ ಮತ್ತು ಮನರಂಜನೆ ಆಟಿಕೆಗಳಲ್ಲಿ ಭಕ್ತರು ಸಂಭ್ರಮಿಸಿದರು.
ಸಡಗರ ಹಾಗೂ ಸಂಭ್ರಮದೊಂದಿಗೆ ಜಾತ್ರೋತ್ಸವವು ನಡೆಯುತ್ತಿದ್ದು ಮುಂದಿನ ಮಂಗಳವಾರದವರೆಗೆ ನಡೆಯಲಿದೆ.
ಪ್ರತಿ ನಿತ್ಯ ರಾತ್ರಿ ಸ್ಥಳೀಯ ಕಲಾವಿದರಿಂದ ನಡೆಯುತ್ತಿರುವ ನಾಟಕ, ಮನರಂಜನೆ ಕಾರ್ಯಕ್ರಮಗಳು ಪ್ರೇಕ್ಷಕರನ್ನು ರಂಜಿಸುತ್ತಿದೆ.